ಬೆಂಗಳೂರು,ಆಗಸ್ಟ್,30,2021(www.justkannada.in): ರಾಜ್ಯದಲ್ಲಿ 6 ರಿಂದ 8ನೇ ತರಗತಿ ಆರಂಭದ ಬಗ್ಗೆ ಮಾತುಕತೆ ನಡೆಸಿದ್ದೇವೆ. ಇಂದಿನ ಸಭೆಯಲ್ಲಿ ಅಂತಿಮ ನಿರ್ಧಾರವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
6 ರಿಂದ 8ನೇ ತರಗತಿ ಶಾಲೆಗಳ ಆರಂಭ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಈಗಾಗಲೇ 9 ರಿಂದ 12ನೇ ತರಗತಿವರೆಗೆ ಶಾಲೆ ಕಾಲೇಜು ಆರಂಭಿಸಿದ್ದೇವೆ. ಶಾಲಾ ಕಾಲೇಜು ಆರಂಭದಿಂದ ಕೊರೋನಾ ಹೆಚ್ಚಳವಾಗಿಲ್ಲ. ಹೀಗಾಗಿ 6 ರಿಂದ 8ನೇ ತರಗತಿ ಆರಂಭ ಕುರಿತು ಇಂದು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದರು.
ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಕೆಲವೇ ಕ್ಷಣಗಳಲ್ಲಿ ಶಾಲೆ ಆರಂಭ ಹಾಗೂ ಗಣೇಶೋತ್ಸವ ಆಚರಣೆ ಸಂಬಂಧ ನಿರ್ಧಾರವಾಗಲಿದೆ.
Key words: talks -about -starting -6th to 8th –Minister- Dr. K. Sudhakar.