ಬೆಂಗಳೂರು,ಜನವರಿ,9,2025 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ 6 ನಕ್ಸಲರನ್ನು ಜನವರಿ 30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್ ಐಎ ವಿಶೇಷ ಕೋರ್ಟ್ ಆದೇಶಿಸಿದೆ.
ನಿನ್ನೆ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಸಿಎಂ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದರು. ಇಂದು ಅವರನ್ನು ಪೊಲೀಸರು ಎನ್‌ಐಎ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಇದೀಗ ಆ ಆರು ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ.
ನಕ್ಸಲರನ್ನು ಕೋರ್ಟ್ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖಚಿತಪಡಿಸಿಕೊಳ್ಳಲಾಗಿತ್ತು.
Key words: 6 Naxalites, judicial custody, NIA Court