ಬೆಂಗಳೂರು,ಜೂನ್,28,2021(www.justkannada.in): ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಈ ಕುರಿತು ಲೇವಡಿ ಮಾಡಿರುವ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ಪಕ್ಷದಲ್ಲಿ ಇರೋದು 68 ಶಾಸಕರು, ಆದರೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಹೆಚ್ಚು ಎಂದು ಟಾಂಗ್ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ. ಉಸ್ತುವಾರಿ ಸುರ್ಜೆವಾಲ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ಇರೋದೇ 68 ಶಾಸಕರು. ಆದ್ರೆ ಸಿಎಂ ಆಕಾಂಕ್ಷಿಗಳು ನೂರಕ್ಕು ಹೆಚ್ಚು ಇದ್ದಾರೆ. .ಕಾಂಗ್ರೆಸ್ ನಲ್ಲಿ ದಿನಕೊಬ್ಬ ಸಿಎಂ ಆಕಾಂಕ್ಷಿ ಹುಟ್ಟಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ ಸಿದ್ದರಾಮಯ್ಯನವರೇ ಮಾಜಿ ಸಚಿವ ಮುನಿಯಪ್ಪ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ? ಎಂದು ಬಿಜೆಪಿ ಪ್ರಶ್ನಿಸಿದೆ.
Key words: 68 MLAs-Congress- more than – hundred -CM –aspirants- BJP