ಮೈಸೂರು,ಅಕ್ಟೋಬರ್,17,2020(www.justkannada.in): ದೇಶ ಹಾಗೂ ರಾಜ್ಯ ಕೊರೋನಾ ಮುಕ್ತವಾಗಲಿ ಎಂದು ತಾಯಿ ಚಾಮುಂಡೇಶ್ವರಿ ಬಳಿ ಕೋರಿಕೊಂಡಿದ್ದೇನೆ. ದೇವಿಯ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್ ಮಂಜುನಾಥ್ ಉದ್ಘಾಟಿಸಿದ ಬಳಿಕ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಕೊರೋನ ಕಾರಣ ಸಾಂಪ್ರದಾಯಿಕ ಹಬ್ಬಗಳನ್ನ ಭಯಭಕ್ತಿಯಿಂದ ಆಚರಿಸೋಣ. ಸರ್ಕಾರಿ ಸಂಸ್ಥೆಯೊಂದನ್ನ ತಮ್ಮ ಸಂಸ್ಥೆ ಎಂದೇ ಭಾವಿಸಿ ಚೆನ್ನಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಕೊರೋನ ವಿರುದ್ದ ಹೋರಾಡಿ ಸಂಘಟನಾತ್ಮಕವಾಗಿ ಗೆಲ್ಲಬೇಕಿದೆ. ದೇಶ ಹಾಗೂ ರಾಜ್ಯ ಕೊರೋನಾ ಮುಕ್ತವಾಗಲಿ ಎಂದು ತಾಯಿ ಚಾಮುಂಡೇಶ್ವರಿ ಬಳಿ ಕೋರಿಕೊಂಡಿದ್ದೇನೆ. ದೇವಿಯ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ. ವೈದ್ಯರು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು, ದಾದಿಯರು ಕೊರೋನಾ ಸಂದರ್ಭದಲ್ಲಿ ವಿಶೇಷ ಸೇವೆ ನೀಡಿದ್ದಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.
ಮಾಸ್ಕ್ – ಸಾಮಾಜಿಕ ಅಂತರ – ಸ್ಯಾನಿಟೈಸರ್ ಅನ್ನು ಬಳಸಿ ಕೊರೋನಾ ಹೋಗಲಾಡಿಸಲು ಶ್ರಮಿಸಬೇಕು. ಅಲ್ಲದೆ, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮಾಡಿ ಪರಿಸ್ಥಿತಿ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ. ಜೊತೆಗೆ ಬೆಂಬಲಕ್ಕೆ ಲಭ್ಯವಿರುವುದಾಗಿ ಹೇಳಿದ್ದರಿಂದ ನೆಮ್ಮದಿ ಉಂಟಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಕಲಬುರಗಿಯಲ್ಲಿ ಪ್ರವಾಹಪೀಡಿತ ಗ್ರಾಮವೊಂದನ್ನು ಸ್ಥಳಾಂತರ ಮಾಡಲಾಗಿದ್ದು, ಕಂದಾಯ ಮಂತ್ರಿಗಳು ಹಲವು ಕಡೆ ಭೇಟಿ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರವಾಹಪೀಡಿತ ಪ್ರದೇಶಗಳ ನಿರ್ವಹಣೆಗೊಸ್ಕರ 34 ಕೋಟಿ ರೂ.ವನ್ನು ನೇರವಾಗಿ ನೆರೆ ಸಂತ್ರಸ್ತರ ಖಾತೆಗೆ ಹಾಕಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಈಗಾಗಲೇ ಹಣ ಇದೆ ಎಂದು ತಿಳಿಸಿದರು.
ಚಾಮುಂಡಿಬೆಟ್ಟಕ್ಕೆ ತುರ್ತಾಗಿ 7.5 ಕೋಟಿ ಹಣ ಬಿಡುಗಡೆ ಮಾಡಲಾಗುತ್ತದೆ. ದೇವಿಕೆರೆ ಹಾಗೂ ಮೆಟ್ಟಿಲುಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತೇವೆ ಶಿಘ್ರಮಂಜೂರಾತಿ ಮಾಡಿ ದೇವಾಲಯದ ಅಭಿವೃದ್ಧಿ ಮಾಡುವುದಾಗಿ ಸಿಎಂ ಬಿಎಸ್ವೈ ಭರವಸೆ ನೀಡಿದರು.
Key words: 7.5 crores- urgently- released –Chamundi hills – CM BS Yeddyurappa