ಬೆಂಗಳೂರು,ಜನವರಿ,26,2022(www.justkannada.in): ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವದ ಸಂಭ್ರಮವಾಗಿದ್ದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಧ್ವಜಾರೋಹಣ ನೆರವೇರಿಸಿ ಸರ್ಕಾರದ ಸಾಧನೆಗಳ ಬಗ್ಗೆ ಕೊಂಡಾಡಿದರು.
ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನಡೆಸಿ ಜನರನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಗಣರಾಜ್ಯೋತ್ಸವದ ಸಮಾರಂಭವನ್ನು ಅರ್ಪಿಸುತ್ತೇನೆ. 2021-22ರಲ್ಲಿ ಜಗತ್ತು ಸವಾಲನ್ನು ನಿಭಾಯಿಸಲು ಹೆಣಗುತ್ತಿರುವಾಗ ನಾವು ಕೋವಿಡ್-19ರ ವಿರುದ್ಧ ಅತ್ಯಂತ ಸಮರ್ಥವಾಗಿ ಹೋರಾಡಿದ್ದೇವೆ. ನಾವು ನವ ಚೈತನ್ಯ ಮತ್ತು ಆಶೋತ್ತರಗಳೊಂದಿಗೆ 2022ಕ್ಕೆ ಹೆಜ್ಜೆ ಇರಿಸಿದ್ದೇವೆ,” ಎಂದರು.
ರಾಜ್ಯದಲ್ಲಿ ಕೋವಿಡ್ ಕಡಿಮೆಯಾಗಿದ್ದು, ಕೊರೊನಾ ವಿರುದ್ಧ ಹೋರಾಟದಲ್ಲಿ ಯಶಸ್ವಿಯಾಗಿದ್ದೇವೆ. ರಾಜ್ಯಾದ್ಯಂತ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಲಾಗಿದೆ. ಮಾಸ್ಕ್ ,ಸಾಮಾಜಿಕ ಅಂತರ, ಸ್ಯಾನಿಟೈಸ್ ಮೂಲಕ ಕೊರೊನಾ ನಿಯಂತ್ರಣ ಮಾಡಬೇಕು.
ಕೋವಿಡ್ 2ನೇ ಅಲೆ ಲಾಕ್ ಡೌನ್ ವೇಳೆ ಕಾರ್ಮಿಕರಿಗೆ ಸರ್ಕಾರದಿಂದ ಪರಿಹಾರ 12,83,307 ಕಾರ್ಮಿಕರಿಗೆ ಪರಿಹಾರ ನೀಡಲಾಗಿದೆ. ಇದಕ್ಕಾಗಿ 236 ಕೋಟಿ ರೂ ವೆಚ್ಚ ಮಾಡಲಾಗಿದೆ ಅಸಂಘಟಿತ ಕಾರ್ಮಿಕರಿಗೆ 628 ಕೋಟಿ ಪರಿಹಾರ ನೀಡಲಾಗಿದೆ.
ತೋಟಗಾರಿಕಾ ಕ್ಷೇತ್ರದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕೃಷಿ ಕ್ಷೇತ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡಿದೆ. ರೈತರ ಶ್ರೇಯೋಭಿವೃದ್ಧಿ ರಾಜ್ಯ ಸರ್ಕಾರ ಬದ್ಧವಾಗಿದೆ. ಕರ್ನಾಟಕ ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.
ಪೊಲೀಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತ, ಫ್ರಂಟ್ ಲೈನ್ ವಾರಿಯರ್ಸ್ ಅಭಿನಂದನೆ ತಿಳಿಸಿದ ರಾಜ್ಯಪಾಲರು, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಅತಿವೃಷ್ಟಿ ಸಂಭವಿಸಿದ್ದು, ಇಂತಹ ಅತಿವೃಷ್ಟಿಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ದೇಶದ ಪ್ರಗತಿ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ ಎಂದು ಹೇಳಿದರು.
ಜಲಾನಯನ ಅಭಿವೃದ್ದಿಗೆ ಸರ್ಕಾರ ಗಮನ ಹರಿಸಿದೆ. ಮೊಬೈಲ್ ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆಗೆ ಹೆಚ್ಚು ಒತ್ತು ಕೊಡಲಾಗಿದೆ ಗ್ರಾಮೀಣ ಪ್ರದೇಶದಲ್ಲಿನ ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಹ ಧನ ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ 14 ಅಮೃತಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ . ಅಮೃತ ಮಹೋತ್ಸ ಸಂದರ್ಭದಲ್ಲಿ ಹಲವು ಯೋಜನೆ, ಕಾರ್ಯಕ್ರಮ ಅನುಷ್ಠಾನ ಗೊಳಿಸಲಾಗಿದೆ ಎಂದರು.
Key words: 73rd Republic Day- Celebration-Governor
ENGLISH SUMMARY..
73rd Republic Day celebrations: Governor Thawar Chand Gehlot lauds Govt. achievements
Bengaluru, January 26, 2022 (www.justkannada.in): Governor of Karnataka Thawar Chand Gehlot hoisted the tricolour at the Manik Sha Parade grounds in Bengaluru to inaugurate the 73rd Republic Day celebrations today. In his address, he lauded the achievements of the State Government.
“The COVID cases are reducing in the state, we are successful in our struggle against the pandemic. The COVID vaccination drive is almost completed and oxygen production capacity has been enhanced. Everyone should follow COVID guidelines and join hands with us in preventing the pandemic by maintaining social distance, wearing masks and sanitizing hands frequently,” he said.
Keywords: 73rd Republic Day celebration/ State Government/ Governor