ಬೆಂಗಳೂರು,ಆಗಸ್ಟ್,15,2023(www.justkannada.in): ರಸ್ತೆ, ಬಂದರು, ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಅಂತರಾಜ್ಯ ರಸ್ತೆಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು.
77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ಶುಭಾಶಯಗಳು. ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ ಉತ್ತೇಜನಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು. ಕೌಶಲ್ಯಾಭಿವೃದ್ಧಿ ಯೋಜನೆ ಮೂಲಕ ಯುವಕರಿಗೆ ತರಬೇತಿ ನೀಡಲಾಗುವುದು. ಕೈಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗುತ್ತೆ. ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಗಳ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೈಗಾರಿಕಾ ವಲಯಗಳ ನಡುವೆ ಸಂಪರ್ಕಿಸಲು ರಸ್ತೆ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದರು.
Key words: 77th Independence Day- Govt -committed – comprehensive -development- CM Siddaramaiah