7ನೇ ವೇತನ ಆಯೋಗ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ನೌಕರರು

ಬೆಂಗಳೂರು,ಜುಲೈ,9,2024 (www.justkannada.in): 7ನೇ ವೇತನ ಆಯೋಗ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ  ಆಗ್ರಹಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ, ಎನ್ ಪಿಎಸ್  ರದ್ದು ಮಾಡಿ ಹಳೇ ಪಿಂಚಣಿ ಯೋಜನೆ ಜಾರಿ, ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಜುಲೈ 28ರೊಳಗೆ  ಬೇಡಿಕೆ ಈಡೇರಿಸಬೇಕುಬೇಡಿಕೆ ಈಡೇರಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಡೆಡ್ ಲೈನ್ ನೀಡಿದ್ದಾರೆ ಎನ್ನಲಾಗಿದೆ.

7ನೇ ವೇತನ ಆಯೋಗದ ವರದಿ ಅನುಷ್ಠಾನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತಿಲ್ಲ. ವೇತನ ಪರಿಷ್ಕರಣೆಗೆ ಕಾದು ಕಾದು ಸರ್ಕಾರಿ ನೌಕರರು ಅಸಮಾಧಾನಗೊಂಡಿದ್ದು, ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

Key words: 7th Pay Commission, Employees, dead line, government