ಡಿ.20 ರಿಂದ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಜೂನ್,25,2024 (www.justkannada.in): 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ.

ಡಿಸೆಂಬರ್ 20 ರಿಂದ ಮಂಡ್ಯದಲ್ಲಿ  ಮೂರು ದಿನಗಳ ಕಾಲ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.  ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: 87th,  All India Kannada Sahitya Conference, mandya