ಬೆಂಗಳೂರು,ನವೆಂಬರ್,4,2022(www.justkannada.in): ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಿಂದ ನಿರೀಕ್ಷೆಗೂ ಮೀರಿ ಬಂಡವಾಳ ಹೂಡಿಕೆಯಾಗಿದೆ. 6 ಲಕ್ಷ ಉದ್ಯೋಗ ಸೃಷ್ಠಿ ನಿರೀಕ್ಷೆ ಹೊಂದಲಾಗಿದೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.
ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಿನ್ನೆ ಸಂಜೆ ಸಂಪನ್ನಗೊಂಡಿತು. ಈ ಹಿನ್ನೆಲೆಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಈ ಸಮಾವೇಶದಿಂದ ರಾಜ್ಯದಲ್ಲಿ ಅಂದಾಜು 9.82 ಲಕ್ಷ ಕೋಟಿ ರೂ. ಹೂಡಿಕೆಯಾಗಲಿದೆ. ಹೂಡಿಕೆಯಿಂದ ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಸಿಂಗಲ್ ವಿಂಡೋದಲ್ಲಿ 2,83,415 ಕೋಟಿ ಒಡಂಬಡಿಕೆಯಾಗಿದೆ. ಸರ್ಕಾರದ ಜೊತೆ ಒಟ್ಟು 5,41,369 ಕೋಟಿ ಒಡಂಬಡಿಕೆಯಾಗಿದೆ. ಇನ್ವೆಸ್ಟ್ ಕರ್ನಾಟಕದಲ್ಲೇ 1,56,000 ಕೋಟಿ ಘೋಷಣೆಯಾಗಿದೆ. ರಾಜ್ಯದಲ್ಲಿ ಒಟ್ಟು 9,81,784 ಕೋಟಿ ರೂ. ಹೂಡಿಕೆಯಾಗಲಿದೆ ಎಂದು ಮಾಹಿತಿ ನೀಡಿದರು.
ಈ ಬಾರಿ ಶೇ 90 ರಷ್ಟು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯಾಗಲಿದೆ. ಇಂಧನ ಕ್ಷೇತ್ರದಲ್ಲಿ ಶೇ 38, ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಶೇ 33, ಮೂಲಸೌಕರ್ಯ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಶೇ 9 ಹೂಡಿಕೆಯಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳೀಸಿದರು.
ರಾಜ್ಯದಲ್ಲಿ 8 ಏರ್ ಪೋರ್ಟ್ ಇವೆ. ಇನ್ನು 3 ಏರ್ ಪೋರ್ಟ್ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗುತ್ತದೆ. ಹೈಸ್ಪೀಡ್ ರೈಲು ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುರುಗೇಶ್ ನಿರಾಣಿ ತಿಳಿಸಿದರು.
Key words: 9.82 lakh crore -capital -investment – state-Minister -Murugesh Nirani.