ಬೆಂಗಳೂರು, ಮಾರ್ಚ್ 24, 2021 (www.justkannada.in):
90ರ ದಶಕದ ವಿಶೇಷ ದಾಖಲೆಯನ್ನು ಕೃನಾಲ್ ಪಾಂಡ್ಯ ಮುರಿದಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮೊದಲನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿಯೇ ಕೃನಾಲ್ ಪಾಂಡ್ಯ ದಾಖಲೆಯ ಅರ್ಧಶತಕ ಸಿಡಿಸಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ.
ನಿನ್ನೆ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಕೃನಾಲ್ ಪಾಂಡ್ಯ 31 ಎಸೆತಗಳಲ್ಲಿ ಅಜೇಯ 58 ರನ್ ಸಿಡಿಸಿದರು.
ಚೊಚ್ಚಲ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ ಆಟಗಾರ ಎಂಬ ಖ್ಯಾತಿಗೆ ಕೃನಾಲ್ ಪಾಂಡ್ಯ ಪಾತ್ರರಾಗಿದ್ದಾರೆ.
31 ವರ್ಷಗಳ ಹಿಂದೆ ಇಂಗ್ಲೆಂಡ್ನ ಜಾನ್ ಮೊರಿಸ್ ನಿರ್ಮಿಸಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.