ಬೆಂಗಳೂರು, ಅಕ್ಟೋಬರ್ 29,2022(www.justkannada.in): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ್ ಬಡಾವಣೆಯ ವ್ಯಾಪ್ತಿಯ 98 ಕಟ್ಟಡಗಳನ್ನು ಸಕ್ರಮಗೊಳಿಸಿ ಸವೋಚ್ಛ ನ್ಯಾಯಾಲಯ 11-10-2022 ರಂದು ಆದೇಶ ಹೊರಡಿಸಿದೆ ಎಂದು ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿ ತಿಳಿಸಿದೆ.
ಡಾ. ಶಿವರಾಮ ಕಾರಂತ್ ಬಡಾವಣೆ ಕುರಿತು ಭಾರತ ಸರ್ವೋಚ್ಛ ನ್ಯಾಯಾಲಯ ರಚಿಸಿರುವ ಸಮಿತಿ ಈವರೆಗೆ 23 ವರದಿಗಳನ್ನು ಮಾನ್ಯ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಒಟ್ಟು 4832 ಕಟ್ಟಡಗಳನ್ನು ಮಾನ್ಯ ಮಾಡಿರುವ ನ್ಯಾಯಪೀಠ ನಾಲ್ಕು ವಾರದೊಳಗಾಗಿ ಸಂಬಂಧಿಸಿದವರಿಗೆ ಹಕ್ಕುಪತ್ರ ವಿತರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿ ಆದೇಶಿಸಿದೆ ಎಂದು ಸಮಿತಿ ಪತ್ರಿಕಾ ಪ್ರಕಟಣೆ ನೀಡಿದೆ.
Key words: 98 buildings – Shivaram Karanth – valid-Supreme Court -order