ಮುಂಬೈ ,ಡಿಸೆಂಬರ್,6,2022(www.justkannada.in): ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕ್ಯಾತೆ ಹಿನ್ನೆಲೆ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳಿಗೆ ಮಸಿ ಬಳಿದು ಕಲ್ಲು ತೂರಾಟ ನಡೆಸಿದ್ದಕ್ಕೆ ಎನ್ಸಿಪಿ ನಾಯಕ ಶರದ್ ಪವಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಡಿ ವಿವಾದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಶರದ್ ಪವಾರ್, “ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಸರ್ಕಾರ ಈ ಪ್ರಕರಣವನ್ನ ಬಗೆಹರಿಸಬೇಕು. ಇಲ್ಲವಾದರೇ, ನಾನೇ ಬೆಳಗಾವಿಗೆ ಹೋಗುತ್ತೇನೆ” ಎಂದಿದ್ದಾರೆ.
ಕರ್ನಾಟಕ ಸಿಎಂ ಹೇಳಿಕೆಯಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಗಡಿ ವಿಚಾರವಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ಮುಂದಿನ 24 ಗಂಟೆಯಲ್ಲಿ ಶಾಂತ ವಾತಾವರಣ ನಿರ್ಮಾಣ ಮಾಡಿ. ಇಲ್ಲದಿದ್ದರೆ ನಾವೂ ತಾಳ್ಮೆ ಕಳೆದುಕೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿಗೆ ಶರದ್ ಪವಾರ್ ತಿಳಿಸಿದ್ದಾರೆ.
Key words: Border -dispute-NCP leader -Sharad Pawar – Belgaum – resolved – next 48 hours