ಬೆಂಗಳೂರು, ಡಿಸೆಂಬರ್ 13, 2022 (www.justkannada.in): ನಟಿ ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಇದೀಗ ಟೈಟಲ್ ಸಂಕಷ್ಟ ಎದುರಾಗಿದೆ.
ಈ ಸಂಬಂಧ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್ ಬಾಬು ತಮ್ಮ ವಕೀಲರ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್ ಕಳುಹಿಸಿದ್ದಾರೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಶೀರ್ಷಿಕೆಯನ್ನು ಬಳಸಕೂಡದು ಎಂದು ಎಸ್.ವಿ.ರಾಜೇಂದ್ರಸಿಂಗ್ ಬಾಬು ಆಗ್ರಹಿಸಿದ್ದಾರೆ.
ಕಳೆದ ಅ.5ರಂದು ರಮ್ಯಾ ತಮ್ಮ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಸಂಸ್ಥೆಯಡಿ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿರುವುದರ ಬಗ್ಗೆ ಘೋಷಿಸಿದ್ದರು. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದಾರೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯು ರಾಜೇಂದ್ರಸಿಂಗ್ ಬಾಬು ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆ.