ಬೆಂಗಳೂರು,ಡಿಸೆಂಬರ್,15,2022(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಚುನಾವಣೆ ಸಮಿತಿ ರಚನೆ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಕಾಂಗ್ರೆಸ್ ಚುನಾವಣೆ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ. ಚುನಾವಣೆ ಸಮಿತಿಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ , ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ್ ಸೇರಿ ಹಿರಿಯ ಹಾಗೂ ಕಿರಿಯ ಮುಖಂಡರಿದ್ದಾರೆ.
ಆದರೆ ಕೆಪಿಸಿಸಿ ಎಲೆಕ್ಷನ್ ಕಮಿಟಿ ಪಟ್ಟಿಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಹೆಸರಿಲ್ಲ. ಚುನಾವಣೆ ಸಮಿತಿಯಲ್ಲಿ ರಮೇಶ್ ಕುಮಾರ್ ಸ್ಥಾನ ಪಡೆದಿಲ್ಲ. ರಮೇಶ್ ಕುಮಾರ್ ಮತ್ತು ಕೆ.ಎಚ್ ಮುನಿಯಪ್ಪ ನಡುವೆ ಅಸಮಾಧಾನ ತಾಂಡವಾಡುತ್ತಿದ್ದು ಈ ಮೂಲಕ ಹೈಕಮಾಂಡ್ ಮಟ್ಟದಲ್ಲಿ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡರೇ ಎಂಬ ಪ್ರಶ್ನೆ ಉದ್ಭವಿಸಿದೆ.
Key words: Formation – Congress- Election- Committee- Former Speaker -Ramesh Kumar