University of Mysore : ಕುಲಪತಿ ನೇಮಕ, ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ.

ಬೆಂಗಳೂರು,ಡಿಸೆಂಬರ್,23,2022(www.justkannada.in): ಮೈಸೂರು ವಿಶ್ವವಿದ್ಯಾಲಯ ಕುಲಪತಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕಳೆದ ಎರಡು ದಿನಗಳ ಹಿಂದೆ ಮೈಸೂರು ವಿವಿ ಕುಲಪತಿ ಆಯ್ಕೆ ಸಂಬಂಧ ಶೋಧನಾ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಸರ್ಕಾರಕ್ಕೆ ಮೂವರ ಹೆಸರನ್ನ ಶಿಫಾರಸ್ಸು ಮಾಡಲಾಗಿತ್ತು. ಆದರೆ ನ್ಯಾಕ್ ಕಮಿಟಿ ಅರ್ಜಿದಾರರನ್ನು ತಿರಸ್ಕರಿಸಿತ್ತು. ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರ ಅರ್ಜಿಯನ್ನೂ ಸಹ ತಿರಸ್ಕರಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರು  ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್  ಮೈಸೂರು ವಿವಿ ಕುಲಪತಿ ನೇಮಕಾತಿಗೆ ಸಂಬಂಧಪಟ್ಟಂತೆ ಅಧಿಸೂಚನೆ ದಿನಾಂಕ: 08.11.2022ರ ಸಂಖ್ಯೆ ಇಡಿ 57 ಯುಎಂವಿ 2022ರ ವಿಚಾರಣೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

Key words: University of Mysore-VC-Appointment- interim- injunction – High Court