ಹುಬ್ಬಳ್ಳಿ,ಡಿಸೆಂಬರ್,29,2022(www.justkannada.in): ಉತ್ತರ ಕರ್ನಾಟಕ ಭಾಗ ಬಹುಬೇಡಿಕೆಯ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿದ್ದು, ಈ ಸಂಬಂಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ಸಿಕ್ಕಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ದವು. ಇದೀಗ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ನಾನು ಬೊಮ್ಮಾಯಿ, ಗೋವಿಂದ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
Key words: Permission -Kalasa-Banduri –Project- Union Minister -Prahlad Joshi