ಬೆಂಗಳೂರು,ಜನವರಿ,2,2023(www.justkannada.in): ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕೂಡ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರಡಿ ಎಫ್ಐಆರ್ ದಾಖಲಾಗಿದೆ. ಉದ್ಯಮಿ ಪ್ರದೀಪ್ ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಹೆಚ್‌ಎಸ್‌ಆರ್ ಲೇಔಟ್ ನಿವಾಸಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದರು. ನಗರದ ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ನಿನ್ನೆ (ಜನವರಿ 1) ನಡೆದಿತ್ತು. ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಮನಗರ ಎಸ್‌ಪಿ ಸಂತೋಷ್ ಬಾಬು ಕೂಡ ಆಗಮಿಸಿದ್ದರು.
ಡೆತ್ನೋಟ್ ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ, ಜಿ.ರಮೇಶ್ ರೆಡ್ಡಿ, ಕೆ.ಗೋಪಿ, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರು ಉಲ್ಲೇಖಿಸಿ 6 ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಬರೆಯಲಾಗಿತ್ತು.
Key words: Businessman-Pradeep -suicide –case-FIR – MLA -Arvind Limbavali.