ಮೈಸೂರು,ಜನವರಿ,16,2023(www.justkannada.in): ವರ್ಗಾವಣೆ, ವೆಶ್ಯಾವಾಟಿಕೆ ದಂಧೆ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಈ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಮೈಸೂರು ನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಈ ಪ್ರಕರಣವನ್ನ ಸಿಐಡಿಗೆ ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಡಿಜಿ&ಐಜಿಪಿ ಆದೇಶದಂತೆ ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಅಧಿಕೃತವಾಗಿ ಸ್ಯಾಂಟ್ರೊ ರವಿ ಪ್ರಕರಣ ವರ್ಗಾವಣೆ ಅಗಲಿದೆ.
ಸ್ಯಾಂಟ್ರೋ ರವಿ ವಿರುದ್ಧ ಪತ್ನಿ ದೂರು ನೀಡಿದ್ದರು. ಪೊಲೀಸ್ ಟ್ರಾನ್ಸ್ಫರ್ ದಂಧೆ ಸೇರಿ ಹಲವು ಆರೋಪವಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.
Key words: Santro Ravi –case- transferred – CID.