ಬೆಂಗಳೂರು,ಜನವರಿ,17,2023(www.justkannada.in): ಚೆಕ್ ಬೌನ್ಸ್ ಪ್ರಕರಣದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
2011ರಲ್ಲಿ ಆಕಾಶ್ ಆಡಿಯೋ ಕಂಪನಿಯ ಎಂ.ಡಿಯಾಗಿದ್ದಂ ಮಧು ಬಂಗಾರಪ್ಪ ಅವರು, ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂ ಬಾಕಿ ಪಾವತಿಗಾಗಿ ಚೆಕ್ ನೀಡಿದ್ದರು. ಈ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಯು ಮಧು ಬಂಗಾರಪ್ಪ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿತ್ತು.
ಈ ನಡುವೆ ಮಧು ಬಂಗಾರಪ್ಪ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಮಧು ಬಂಗಾರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ.
Key words: Congress leader -Madhu Bangarappa -granted -bail – check bounce- case.