ಬೆಂಗಳೂರು,ಜನವರಿ,27,2023(www.justkannada.in): ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ಯುವಕರು ಶಾಲಾ ಬಾಲಕನಿಗೆ ಥಳಿಸಿದ್ದಾರೆಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್ ಮಾಡಲಾಗುತ್ತಿದ್ದು ಈ ಪ್ರಕರಣ ಸಂಬಂಧ ಈಗಾಗಲೇ ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರನ್ನ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ರಾಜ್ಯಪೊಲೀಸ್ ಇಲಾಖೆ, ತಾವು ಕೇಳಿದ ಹಣವನ್ನು ನೀಡದಿದ್ದಕ್ಕಾಗಿ ಇಬ್ಬರು ಯುವಕರು ಶಾಲಾ ಬಾಲಕನನ್ನು ಥಳಿಸುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ @BlrCityPolice, @kspfactcheck ಮತ್ತು @CPBlr ಹ್ಯಾಂಡಲ್ ಗಳನ್ನು ಇತರ ಹ್ಯಾಂಡಲ್ ಗಳೊಂದಿಗೆ ಟ್ಯಾಗ್ ಮಾಡಲಾಗುತ್ತಿದೆ.
ಈ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 23.01.2023 ರಂದು ನಡೆದಿದ್ದು, ದಿನಾಂಕ 24.01.2023 ರಂದು ಕಾಟನ್ ಪೇಟೆಯ ನ್ಯೂ ಪ್ರೆಸಿಡೆನ್ಸಿ ಶಾಲೆಯ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ಇದು ಬೆಂಗಳೂರು ನಗರದಲ್ಲಿ ನಡೆದ ಸತ್ಯ ಘಟನೆಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸರು ಈಗಾಗಲೇ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಅಪರಾಧಿಗಳ ಬಂಧನವಾಗಿ ಪ್ರಕರಣವು ತನಿಖೆಯ ಹಂತದಲ್ಲಿರುತ್ತದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಅನಗತ್ಯ ಗಮನ ಸೆಳೆಯುವ ಕಾರಣ ಹಂಚಿಕೊಳ್ಳುವ ಅಗತ್ಯವಿಲ್ಲ ಎಂದು ಮನವಿ ಮಾಡಿದೆ.
Key words: school boy – beaten -case –bangalore- Two people – arrested- police department