EXCLUSIVE : ಲಂಚ ಪಡೆದ ಆರೋಪ ಸಾಬೀತು : ಜೈಲು ಶಿಕ್ಷೆಗೊಳಗಾದ ಪ್ರಾದೇಶಿಕ ಸಾರಿಗೆ ಆಯುಕ್ತ,

ಮೈಸೂರು, ಆ.22, 2019 : (www.justkannada.in news) : ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಆಯುಕ್ತರೊಬ್ಬರಿಗೆ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

ಮೈಸೂರು ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಆರ್.ಟಿ.ಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಪದ್ಮ ಪ್ರಸಾದ್ ಶಿಕ್ಷೆಗೊಳಗಾದ ಅಧಿಕಾರಿ. ನಗರದ 3 ನೇ ಹೆಚ್ಚುವರಿ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು ಈ ಆದೇಶ ಪ್ರಕಟಿಸಿದ್ದಾರೆ.

ಏನಿದು ಘಟನೆ :

ಕೆಲ ತಿಂಗಳ ಹಿಂದೆ ಮೈಸೂರು ನಗರದ ಆರ್.ಟಿ.ಒ ಪದ್ಮ ಪ್ರಸಾದ್, ಕಚೇರಿಯಲ್ಲಿ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ರೆಂಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಬಳಿಕ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆರ್.ಟಿ.ಒ ಪದ್ಮ ಪ್ರಸಾದ್ ಹಾಗೂ ಏಜೆಂಟ್ ದಯಾನಂದ ವಿರುದ್ಧ ಆರೋಪ ಮಾಡಲಾಗಿತ್ತು.
ಈ ಪ್ರಕರಣ ವಿಚಾರಣೆ ನಡೆಸಿದ ನಗರದ 3 ನೇ ಹೆಚ್ಚುವರಿ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಭರತ್ ಕುಮಾರ್ ಅವರು, ಆರೋಪಿ ಲಂಚ ಪಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದರು.
ಆದೇಶ ಹೊರ ಬೀಳುತ್ತಿದ್ದಂತೆ ಪೊಲೀಸರು ಅಪರಾಧಿಗಳನ್ನು ಬಂಧಿಸಿ ಮೈಸೂರಿನ ಕಾರಾಗೃಹಕ್ಕೆ ಕಳುಹಿಸಿದರು.
ಈ ಪ್ರಕರಣದಲ್ಲಿ ಸರಕಾರಿ ಅಭಿಯೋಜಕಿ ಮುತ್ತಮ್ಮ ವಾದ ಮಂಡಿಸಿದ್ದರು.

key words : RTO commissioner- has been sentenced -to four years rigorous imprisonment-Mysore

SUMMARY :
RTO commissioner has been sentenced to four years rigorous imprisonment after he was convicted of bribery. Padma Prasad serving as RTO at Regional Transport Office in Mysore. This order has been issued by the District Judge of the 3rd Additional Special Court of the Mysore city.