ನವದೆಹಲಿ,ಫೆಬ್ರವರಿ,14,2023(www.justkannada.in): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ 4 ವರ್ಷಗಳ ಹಿಂದೆ ಇದೇ ದಿನ 40 ಮಂದಿ ಸಿಆರ್ಪಿಎಫ್ ಯೋಧರನ್ನ ಬಲಿತೆಗೆದುಕೊಂಡ ಘಟನೆಯನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಈ ದಾಳಿ ವೇಳೆ ಹುತಾತ್ಮರಾದ ವೀರಯೋಧರ ಬಲಿದಾನವನ್ನ ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪುಲ್ವಾಮದಲ್ಲಿ ಈ ದಿನ ನಾವು ಕಳೆದುಕೊಂಡ ವೀರರನ್ನು ಸ್ಮರಿಸುತ್ತಿದ್ದೇನೆ. ಅವರ ಮಹಾ ಬಲಿದಾನವನ್ನು ನಾವ್ಯಾರೂ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಎದೆಗಾರಿಕೆಯು ಪ್ರಬಲ ಭಾರತದ ನಿರ್ಮಾಣಕ್ಕೆ ಪ್ರೇರಣೆ ನೀಡುತ್ತದೆ. ಅಭಿವೃದ್ಧಿಯತ್ತ ದೇಶ ಸಾಗಲು ವೀರಯೋಧರ ಬಲಿದಾನ ಪ್ರೇರಣೆಯಾಗಲಿ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರನ್ನು ಹೊತ್ತು ರಸ್ತೆಯಲ್ಲಿ ಹೋಗುತ್ತಿದ್ದ ಟ್ರಕ್ ಗೆ ಸ್ಫೋಟಕಗಳನ್ನು ತುಂಬಿದ್ದ ವಾಹನವೊಂದು ಢಿಕ್ಕಿ ಹೊಡೆದು ಸ್ಫೋಟಗೊಳಿಸಿತ್ತು. ಘಟನೆಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು.
Key words: Pulwama-incident-PM- Modi –Tweet