ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯ ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ರೈತರ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಅವಧಿಯ ಕೊನೆಯ ಬಜೆಟ್ ಮಂಡಿಸುತ್ತಿದ್ದು ಈ ವೇಳೆ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಶೂನ್ಯ ಬಡ್ಡಿಯಲ್ಲಿ ರೈತರಿಗೆ ರೂ.5 ಲಕ್ಷ ಸಾಲ ಸೌಲಭ್ಯ , 30 ಲಕ್ಷಕ್ಕೂ ಹೆಚ್ಚು ರೈತರಿಗೆ 25 ಸಾವಿರ ಕೋಟಿ ರೂ. ಸಾಲ ನೀಡಲಾಗುತ್ತದೆ ಎಂದಿದ್ದಾರೆ.
ಭೂಸಿರಿ ಎಂಬ ನೂತನ ಯೋಜನೆ ಅಡಿ 10,000 ರೂ. ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ರೈತ ಸಿರಿ ಯೋಜನೆಯಡಿಯಲ್ಲಿ ಕಿರುಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟರ್ಗೆ 10 ಸಾವಿರ ರೂಪಾಯಿ ಪ್ರೋತ್ಸಾಹಧನ ಘೋಷಣೆ. ಸಹ್ಯಾದ್ರಿ ಯೋಜನೆಯಡಿಯಲ್ಲಿ ಕರಾವಳಿ ಮಲೆನಾಡು ಹಾಗೂ ಅರೆಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ ನಾಳ ಅಭಿವೃದ್ಧಿ ಕಾಮಗಾರಿಗೆ 75 ಕೋಟಿ ರೂ. ಅನುದಾನ ಮೀಸಲೀಡುವುದಾಗಿ ಘೋಷಿಸಿದ್ದಾರೆ.
ಶಿಕ್ಷಣ, ಉದ್ಯೋಗ, ಸಬಲೀಕರಣ ಮಂತ್ರದೊಂದಿಗೆ, ದುರ್ಬಲ ವರ್ಗದವರಿಗೆ, ಎಸ್ಸಿ,ಎಸ್ಟಿಗೆ ಬೆಂಬಲ ನೀಡಿದ್ದೇನೆ. ಫಲಾನುಭವಿಗಳಿಗೆ ನೇರವಾಗಿ ಸವಲತ್ತು ನೀಡುವ ಮೂಲಕ ಪಾರದರ್ಶಕತೆ ಮೆರೆದಿದ್ದೇವೆ. ಶ್ರಮಿಕ ವರ್ಗದವರ ಬಗ್ಗೆಯೂ ಕಾಳಜಿ ವಹಿಸಿದ್ದೇವೆ ಎಂದಿದ್ದಾರೆ.
ಇನ್ನು ಪ್ರತಿ ಗ್ರಾಮಪಂಚಾಯಿತಿಗೆ 60 ಲಕ್ಷ ರೂ ಅನುಧಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
Key words: Interest-free- loan – farmers-Rs 5 lakh – announcement – budget.