ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪೋಸ್ಟರ್, ಸೂಟ್ಕೇಸ್, ಹಣವಿರುವ ಗುಟ್ಕಾ ಬ್ಯಾಗ್, ನಕಲಿ ನೋಟ್ ಪ್ರದರ್ಶಿಸಿ ಸರ್ಕಾರದ ವಿರುದ್ದ ಕಿಡಿಕಾರಿದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ವಿಪಕ್ಷನಾಯಕ ಸಿದ್ದರಾಮಯ್ಯ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ ಹಾಗೂ ಸಲೀಂ ಅಹ್ಮದ್ ಭಾಗಿಯಾಗಿದ್ದರು.
ಮಾಜಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಪ್ರತಿಭಟನಾರ್ಯಾಲಿಯಲ್ಲಿ ತೆರಳಿ ರೇಸ್ ಕೋರ್ಸ್ ನಲ್ಲಿರುವ ಸಿಎಂ ಬಸರವಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನ ತಡೆದು ವಶಕ್ಕೆ ಪಡೆದರು.
Key words: Congress- protest-against-CM- Basavaraja bommai