ಬೆಂಗಳೂರು, ಮಾರ್ಚ್ 05, 2023 (www.justkannada.in): ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಭೂ ಸಿರಿ ಯೋಜನೆ ಜಾರಿಗೆ ತರಲಾಗುತ್ತಿದೆ. ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ 10,000 ರೂ. ಗಳನ್ನು ರೈತರ ಖಾತೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ ನಗರದ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿಅವರು ಮಾತನಾಡಿದರು.
ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಭೂ ಸಿರಿ ಯೋಜನೆ ಜಾರಿಗೆ ತರಲಾಗುತ್ತಿದೆ. ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ 10,000 ರೂ. ಗಳನ್ನು ರೈತರ ಖಾತೆ ಜಮೆ ಮಾಡಲಾಗುವುದು. ಬಿತ್ತನೆ ಬೀಜ, ಗೊಬ್ಬರ ಖರೀದಿಗಾಗಿ ರೈತರು ಸಾಲ ಮಾಡದಂತೆ ತಡೆಯುಲು ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು.
ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪವಂತೆ ಮಾಡಲಾಗಿದೆ ಎಂದು ತಿಳಿಸಿದರು.