ಚಿಕ್ಕಬಳ್ಳಾಪುರ,ಮಾರ್ಚ್,17,2023(www.justkannada.in): ಚಿಕ್ಕಬಳ್ಳಾಪುರ ಜನರ ಬಹು ದಿನಗಳ ಕೂಗಿಗೆ ಜಯ ಸಿಕ್ಕಿದ್ದು ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಕೆಎಸ್ ಆರ್ ಟಿಸಿ ಅನುಮತಿ ನೀಡಿದೆ.
ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಗಳು ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಜನವರಿ 4ರಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿತ್ತು.
ಬಿಎಂಟಿಸಿ ಬಸ್ ಸೇವೆಯನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸಿದ್ದಕ್ಕೆ ಕೆಎಸ್ ಆರ್ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ಮಾಡಿದರೆ ಕೆಎಸ್ ಆರ್ ಟಿಸಿ ಆದಾಯಕ್ಕೆ ಹೊಡೆತ ಬೀಳುವ ಸಾಧ್ಯತೆ ಇತ್ತು.
ಹೀಗಾಗಿ ಕೆಎಸ್ ಆರ್ ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಕೆಎಸ್ ಆರ್ ಟಿಸಿ ಅನುಮತಿ ನೀಡಿದೆ ಎನ್ನಲಾಗಿದೆ.
Key words: KSRTC -permits -BMTC bus -service – Chikkaballapur.