ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿಗೆ ಅಸ್ತು: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,23,2023(www.justkannada.in): ಲಿಂಗಾಯತ ಪಂಚಮಸಾಲಿ ಮತ್ತು ಒಕ್ಕಲಿಗ ಸಮುದಾಯಕ್ಕೆ  2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ತೆರವುಗೊಳಿಸಿದ್ದು, ಈ ಮೂಲಕ ಚುನಾವಣೆ ಸಮೀಪದಲ್ಲಿ ಸರ್ಕಾರಕ್ಕೆ ರಿಲೀಫ್ ಸಿಕ್ಕಂತಾಗಿದೆ.

2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದರು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ.

ಅಲ್ಲದೇ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕೆಂದು ಸೂಚನೆ ನೀಡಿ ಮಧ್ಯಂತರ ಆದೇಶ ತೆರವುಗೊಳಿಸಿದೆ.

Key words 2C, 2D reservation –Panchamasali-Okkaliga community- High Court