ಬೆಂಗಳೂರು,ಆ,24,2019(www.justkannada.in): ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಅರುಣ್ ಜೇಟ್ಲಿ ಧೀಮಂತ ನಾಯಕರು. ಅವರೊಬ್ಬರು ಕಾನೂನು ಪಂಡಿತರಾಗಿದ್ದರು. ಯಾವುದೇ ಪಕ್ಷ ಇರಲಿ ಅವರೊಬ್ಬ ಮುತ್ಸದಿ ನಾಯಕ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ. ಅವರ ನಿಧನ ದುಃಖ ತರುವ ವಿಚಾರ.ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಂಬನಿ ಮಿಡಿದರು.
ಅರುಣ್ ಜೇಟ್ಲಿ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.”ಅರುಣ್ ಜೇಟ್ಲಿ ವಿಧಿವಶರಾಗಿರುವ ಸುದ್ದಿ ಕೇಳಿ ಬೇಸರವಾಯಿತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.
ಅರುಣ್ ಜೇಟ್ಲಿ ಅವರ ನಿಧನದಿಂದ ತುಂಬಾ ದುಃಖಿತನಾಗಿದ್ದೇನೆ. ದೇಶವನ್ನು ಕಟ್ಟಲು ಅವರು ನೀಡಿದ ಕೊಡುಗೆ ಅಪಾರ. ಅವರ ಕುಟುಂಬ ಹಾಗೂ ಹಿತೈಶಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಸಂತಾಪ ಸೂಚಿಸಿದ್ದಾರೆ. “ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಗಲಿದ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ.
Key words: death – former Union Minister- Arun Jaitley -mourned -several – Representatives