ಬೆಂಗಳೂರು,ಮಾರ್ಚ್,27,2023(www.justkannada.in): ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡುವೆಯೂ ಇಂದಿನಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಆರಂಭವಾಗಿವೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5 ಮತ್ತು 8ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿದೆ. 5ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮಾ.30ರವರೆಗೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 1ರವರೆಗೆ ಪರೀಕ್ಷೆ ನಡೆಯಲಿದೆ.
ಈ ನಡುವೆ 5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ಸಂಬಂಧ ಇಂದು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಗೊಂದಲದ ನಡುವೆ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ. ಆಯಾ ಶಾಲೆಗಳೇ ಪರೀಕ್ಷಾ ಕೇಂದ್ರಗಳಾಗಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಬಹುತೇಕ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ.
Key words: Board-examination – 5th and 8th –class-students- start- today.