ನವದೆಹಲಿ,ಆ,26,2019(www.justkannada.in): ಅನರ್ಹತೆ ಪ್ರಶ್ನಿಸಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ಅರ್ಜಿಯನ್ನ ತುರ್ತು ವಿಚಾರಣೆ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ನೀಡಿದ್ದ ಆದೇಶ ಪ್ರಶ್ನಿಸಿ 17 ಮಂದಿ ಶಾಸಕರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಆದರೆ ಸುಪ್ರೀಂಕೋರ್ಟ್ ಅರ್ಜಿಯ ತುರ್ತು ವಿಚಾರಣೆ ಮಾಡಲು ನಿರಾಕರಿಸಿದೆ. ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠ ತುರ್ತು ವಿಚಾರಣೆಗೆ ನಿರಾಕರಿಸಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ಸೇರಲು ಕಾತರರಾಗಿರುವ ಅನರ್ಹ ಶಾಸಕರ ಆಸೆಗೆ ಈ ಮೂಲಕ ಸುಪ್ರೀಂಕೋರ್ಟ್ ತಣ್ಣೀರೆರೆಚಿದೆ. ಇನ್ನು ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸುತ್ತೆ ಎಂದು ಗೊತ್ತಿತ್ತು. ಹೀಗಾಗಿ ಅನರ್ಹ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಅರ್ಜಿ ಮೆನ್ಷನ್ ಗೆ ಮುಂದಾಗಿರಲಿಲ್ಲ. ಆದರೆ ತಮ್ಮ ಜ್ಯೂನಿಯರ್ ಕಳುಹಿಸಿ ಅರ್ಜಿ ಮೆನ್ಷನ್ ಮಾಡಿಸಿದ್ದರು ಎನ್ನಲಾಗಿದೆ.
Key words: Supreme Court -shock – Disqualified MLA-emergency- hearing