ರಾಮನಗರ,ಏಪ್ರಿಲ್,20,2023(www.justkannada.in): ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗಾಗಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿರುವ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ಡಿಕೆ ಸುರೇಶ್ ಸಹ ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಸಂಸದ ಡಿಕೆ ಸುರೇಶ್ ಅವರು ಕನಕಪುರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿನಿಧಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಸಹ ಅವರು ಮೊನ್ನೇ ಏಪ್ರಿಲ್ 17ರಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದರು.
ಆದರೆ ನಾಮಪತ್ರ ತಿರಸ್ಕೃತವಾಗುವ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು ಅವರ ಸಹೋದರ ಡಿಕೆ ಸುರೇಶ್ ಸಹ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
Key words: MP -DK Suresh- submits- nomination – Congress candidate – Kanakapur constituency.