ಬೆಂಗಳೂರು,ಆ,27,2019(www.justkannada.in):ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಜನರ ಸಮಸ್ಯೆಗೆ ಸ್ಪಂದಿಸುವುದು ನಮ್ಮ ಆದ್ಯತೆ. ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಿ ದುಡಿಯೋಣ ಎಂದು ಸಚಿವರಿಗೆ, ರಾಜ್ಯ ಬಿಜೆಪಿನಾಯಕರಿಗೆ ಕಾರ್ಯಕರ್ತರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಕರೆ ನೀಡಿದರು.
ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಪದಗ್ರಹಣ ಮಾಡಿದ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಲೋಕಸಭೆ ಚುನಾವಣೆಯಲ್ಲಿ ನಾವು ದಾಖಲೆ ಸೃಷ್ಟಿಸಿದ್ದೀವಿ 25 ಸ್ಥಾನ ಗೆದ್ದಿದೀವಿ. ಪ್ರವಾಹ ಪರಿಸ್ಥಿತಿ ನಿಭಾವಣೆಗೆ ಕೈಗಾರಿಕೋದ್ಯಮಿಗಳು, ಸರ್ಕಾರಿ ನೌಕರರು, ಹಲವು ಸಂಘ ಸಂಸ್ಥೆಗಳು ಮುಂದೆ ಬಂದಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ನೆರವು ಕೊಡೋದು ನಮ್ಮ ಮುಂದಿನ ಸವಾಲು. ನಮ್ಮೆಲ್ಲರ ಕಾರ್ಯಕ್ರಮಗಳು ನಿಂತರೂ ಪರವಾಗಿಲ್ಲ. ಸಂತ್ರಸ್ತರಿಗೆ ಸಮರ್ಪಕ ಪುನರ್ವಸತಿ ಕಲ್ಪಿಸುತ್ತೇವೆ ಎಂದು ನುಡಿದರು.
ರಾಜ್ಯದ ಪ್ರವಾಹ ಪರಿಹಾರ ಪರಿಸ್ಥಿತಿ ನಿಬಾಯಿಸಲು ನಮ್ಮ ನಿರೀಕ್ಷೆ ಮೀರಿ ಹೆಚ್ಚಿನ ನೆರವು ಕೇಂದ್ರ ಸರ್ಕಾರ ನೀಡಲಿದೆ. ಪ್ರವಾಹ ಸಂತ್ರಸ್ತರಿಗೆ ಕೈಗಾರಿಕೋದ್ಯಮಿಗಳು, ಸರ್ಕಾರಿ ನೌಕರರು, ಮಠಾಧೀಶರು ಉದಾರ ನೆರವು ನೀಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಜನರ ಸಮಸ್ಯೆ ಗೆ ಸ್ಪಂದಿಸುವುದು ನಮ್ಮ ಆದ್ಯತೆ ಎಂದು ನುಡಿದರು.
ಮುಖ್ಯಮಂತ್ರಿಯಾದ ದಿನದಿಂದ ಒಂದು ನಿಮಿಷ ವಿಶ್ರಾಂತಿ ಪಡೆಯದೆ ದುಡಿಯುತ್ತಿದ್ದೇನೆ. ಈಗ ಉತ್ತಮ ಸಂಪುಟ ಇದೆ. ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ ದುಡಿಯುವ ಜತೆಗೆ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ತರುವತ್ತ ಎಲ್ಲರೂ ಒಗ್ಗಟ್ಟಾಗಿ ದುಡಿಯಬೇಕಿದೆ ಎಂದು ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದರು.
Key words: Our priority – respond – problem – people-CM BS Yeddyurappa