ಬೆಂಗಳೂರು,ಮೇ,2023(www.justkannada.in): ನೂತನ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದ್ದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೀಯ ಗಣ್ಯರು ಆಗಮಿಸಿದ್ದಾರೆ.
ಮಧ್ಯಾಹ್ನ 12.30ಕ್ಕೆ ಸಿಎಂ ಮತ್ತು ಡಿಸಿಎಂ ಹಾಗೂ 8 ಸಚಿವರು ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಗಣ್ಯಾತೀಗಣ್ಯರು ಸಾಕ್ಷಿಯಾಗಲಿದ್ದಾರೆ.
ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣುಗೋಪಾಲ್, ನಟ ಕಮಲ್ ಹಾಸನ್, ಬಿಹಾರ ಸಿಎಂ ನಿತೀಶ್ ಕುಮಾರ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಕಾರ್ಯಕ್ರಮದಲ್ಲಿ ರಾಜಸ್ಥಾನ ಸಿಎಂ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲಪ್ರದೇಶದ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, , ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
Key words: Dignitaries- arrive – attend- CM – DCM -swearing- oath-bangalore