ಬೆಂಗಳೂರು,ಮೇ,23,2023(www.justkannada.in): ನಟ ಶಿವರಾಜ್ ಕುಮಾರ್ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿನ ನಾಗವಾರದಲ್ಲಿರುವ ನಟ ಶಿವರಾಜ್ಕುಮಾರ್ ನಿವಾಸಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ನೀಡಿದರು. ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ದಂಪತಿ ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಬೇಸರಗೊಂಡಿದ್ದ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ.
ಇನ್ನ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸಿದ್ದಕ್ಕೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
Key words: Congress –leader-Randeep Singh Surjewala- visit -Shivaraj Kumar