ಬೆಂಗಳೂರು,ಮೇ,30,2023(www.justkannada.in): ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ ಅನುದಾನದಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ರಾಜ್ಯ ಮುಖ್ಯಕಾರ್ಯದರ್ಶಿಗೆ ಸಿಎಂ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3ಸಾವಿರ ಕೋಟಿ ರೂ. ಅನುದಾನದಲ್ಲಿ ವ್ಯಾಪಕ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ತನಿಖೆ ನಡೆಸಲು ಸಿಎಂ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದು 15 ದಿನದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ದೂರು ನೀಡಿದ್ದರು. ಸಿಎಂ ವಿವೇಚನಾ ಕೋಟಾದಲ್ಲಿ ಕ್ರಿಯಾ ಯೋಜನೆ ರೂಪಿಸುವಲ್ಲಿ ಅಕ್ರಮ ನಡೆದಿದೆ . ಕಳಪೆ ಕಾಮಾಗಾರಿ ಬಗ್ಗೆ ಸಿಎಜಿ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸುವ ಅಗತ್ಯವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.
Key words: illegality – welfare- Karnataka- Development Board – CM Siddaramaiah -investigation.