ನವದೆಹಲಿ, ಜೂನ್,3,2023(www.justkannada.in): ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಿಗದಿಯಾಗಿದ್ದ ಪ್ರಧಾನಿ ಮೋದಿ ಅವರ ಎಲ್ಲಾ ಕಾರ್ಯಕ್ರಮಗಳನ್ನ ರದ್ಧುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಒಂದೇ ಮಾತರಂ ರೈಲು ಉದ್ಘಾಟನೆ ಸೇರಿ ಹಲವು ಕಾರ್ಯಕ್ರಮಗಳನ್ನ ಪ್ರಧಾನಿ ಮೋದಿ ಹಮ್ಮಿಕೊಂಡಿದ್ದರು. ಆದರೆ ರೈಲು ದುರಂತ ಹಿನ್ನೆಲೆ ಎಲ್ಲಾ ಕಾರ್ಯಕ್ರಮಗಳನ್ನ ಪ್ರಧಾನಿ ಮೋದಿ ರದ್ದುಗೊಳಿಸಿದ್ದು ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಅಲ್ಲದೆ ಗಾಯಾಳುಗಳ ಆರೋಗ್ಯವನ್ನೂ ವಿಚಾರಿಸುವ ಸಾಧ್ಯತೆ ಇದೆ.
ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿಯವರು ಉನ್ನತಮಟ್ಟದ ಸಭೆ ಕರೆದಿದ್ದಾರೆ. ಸಂಬಂಧಿತ ರೈಲ್ವೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ.
ಒಡಿಶಾದ ಬಾಲಸೋರ್) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಭೀಕರ ರೈಲು ದುರಂತ ಸಂಭವಿಸಿದ್ದು 250ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Key words: Train -accident -case – Odisha- PM Modi- programs -cancelled.