ಮಂಗಳೂರು,ಜೂನ್,6,2023(www.justkannada.in): ‘ನೈತಿಕ ಪೊಲೀಸ್ಗಿರಿ ತಡೆಗಾಗಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ’ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಆ್ಯಂಟಿ ಕಮ್ಯುನಲ್ ವಿಂಗ್ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ.ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಗಟ್ಟದಿದ್ದರೇ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು. ಅದ್ದರಿಂದ ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದರು.
ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
Key words: anti-communal -wing -Home Minister -Dr. G. Parameshwar.