ದಾವಣಗೆರೆ,ಜೂನ್,22,2023(www.justkannada.in) ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ಆಗದಿದ್ದರೇ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡ್ತಿದೆ. ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನ ಕೇಳಿ ಜನರಿಗೆ ಭರವಸೆ ಕೊಟ್ಟಿದ್ರಾ?. ಚುನಾವಣೆಯಲ್ಲಿ ಗೆಲ್ಲಬೇಕೆಂದು ಕಾಂಗ್ರೆಸ್ನವರೇ ಭರವಸೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರ ಈಗಾಗಲೇ ತಲಾ 5 ಕೆಜಿ ಅಕ್ಕಿ ಕೊಡುತ್ತಿದೆ. ಜನರಿಗೆ ಭರವಸೆ ಕೊಟ್ಟಂತೆ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡಬೇಕು. 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಬಿಎಸ್ ವೈ ಹರಿಹಾಯ್ದರು.
Key words: guarantee- schemes-, leave – power-Former CM- BS Yeddyurappa