ಬೆಂಗಳೂರು,ಜೂನ್,22,2023(www.justkannada.in): 9 ಮತ್ತು 10ನೇ ತರಗತಿ ಶಾಲಾ ಮಕ್ಕಳಿಗೂ ಮೊಟ್ಟೆ ವಿತರಣೆಗೆ ಚಿಂತನೆ ನಡೆಸಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಾಲಾ ಮಕ್ಕಳಿಗೆ ವಿತರಿಸಲಾಗುವ ಮೊಟ್ಟೆಗಳಿಗೂ ರಾಜ್ಯ ಕಾಂಗ್ರೆಸ್ ಸರ್ಕಾರ ತಡೆ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಮಕ್ಕಳಿಗೆ ಮೊಟ್ಟ ವಿತರಣೆ ನಾವು ತಡೆ ಹಿಡಿದಿಲ್ಲ. ಇದಲ್ಲೆ ಅಪಪ್ರಚಾರ, ಸುಳ್ಳು ಸುದ್ದಿಯಾಗಿದೆ. ಮೊಟ್ಟೆಗಳನ್ನನೀಡುವ ಪ್ರಮಾಣ ಹೆಚ್ಚಳ ಮಾಡುತ್ತೇವೆ 9 ರಿಂದ 10ನೇ ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆಗೆ ಚಿಂತನೆ ಮಾಡಿದ್ದೇವೆ ಎಂದರು.
ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಿಸುವ ನಿಟ್ಟಿನಲ್ಲಿ ನೀಡಬೇಕಿರುವಂತಹ ಪೋಷಕಾಂಶ ಯುಕ್ತ ಆಹಾರವನ್ನು ನೀಡಲಾಗುತ್ತಿದೆ. ಆ ಪ್ರಮಾಣದಲ್ಲಿ ಯಾವುದೇ ಕಡಿತವನ್ನು ಸರ್ಕಾರ ಮಾಡಿಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
Key words: Minister- Madhu Bangarappa -distribute -eggs – 9th and 10th class -children.