ಬೆಂಗಳೂರು,ಜುಲೈ,5,2023(www.justkannada.in): ಇಂದೇ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಕೇಂದ್ರ ನಾಯಕರು ಅಭಿಪ್ರಾಯ ಸಂಗ್ರಹಿಸಿ ಹೋಗಿದ್ದಾರೆ. ಇಂದು ಪ್ರಧಾನಿ ಮೋದಿ, ಅಮಿತ್ ಶಾ ಅವರ ಜತೆ ಜರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಹೀಗಾಗಿ ಇಂದೇ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಘೋಷಣೆಯಾಗಬಹುದು. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.
ಇನ್ನು ನಿನ್ನೆ ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಮೊಂಡಾಟ ಬಿಡಲಿ ಎಂದು ಹೇಳಿಕೆ ನೀಡಿದ ಸಿಎಂ ಸಿದ್ಧರಾಮಯ್ಯ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಬಿಎಸ್ ಯಡಿಯೂರಪ್ಪ, ಗ್ಯಾರಂಟಿ ಅನುಷ್ಠಾನಗೊಳಿಸದೇ ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
Key words: opposition leader – state president – announced –today-Former CM -BS Yeddyurappa