ಬೆಂಗಳೂರು,ಜುಲೈ,6,2023(www.justkannada.in): ಕೆಎಸ್ ಆರ್ ಟಿಸಿ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸದನದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಕೃಷಿ ಸಚಿವ ಚಲುವರಾಯಸ್ವಾಮಿ ನಡುವೆ ವಾಗ್ವಾದ ನಡೆದಿದೆ.
ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಸದನದಲ್ಲಿ ಪ್ರಸ್ತಾಪ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಇಷ್ಟೊಂದು ಹತಾಶರಾಗಬೇಡಿ ಎಂದ ಕುಮಾರಸ್ವಾಮಿಗೆ ಹೇಳಿದರು. ಇದರಿಂದ ಗರಂ ಆದ ಕುಮಾರಸ್ವಾಮಿ, ಯಾರು ಹತಾಶರಾಗಿರುವುದು ಎಂದು ಆಕ್ರೋಶ ಹೊರಹಾಕಿದರು. ಈ ಸಮಯದಲ್ಲಿ ನಿಮಗೆ ನಾಚಿಕೆಯಾಗಬೇಕು ಎಂದು ಚಲುವಾರಯಸ್ವಾಮಿ ಪ್ರತ್ಯುತ್ತರ ನೀಡಿದಾಗ ಸಿಟ್ಟಿಗೆದ್ದ ಹೆಚ್.ಡಿ ಕುಮಾರಸ್ವಾಮಿ, ನಿಮ್ಮದು ಗೊತ್ತಿದೆ ಕುಳಿತುಕೊಳ್ಳಿ ಹೇಳಿದರು.
ಈ ವೇಳೆ ಪಂಚಾಯಿತಿ ಲೆವೆಲ್ ನಲ್ಲಿ ರಾಜಕೀಯ ಮಾಡುತ್ತಿರುವವರು ನೀವು. ನಾಚಿಕೆ ಆಗಬೇಕು ನಿಮಗೆ ಎಂದು ಚಲುವರಾಯಸ್ವಾಮಿ ಹೇಳಿದಾಗ, ನಾಚಿಕೆ ಆಗಬೇಕಿರುವುದು ನನಗಲ್ಲ ನಿಮಗೆ, ಕೂರಯ್ಯ ಸಾಕು, ನಾಚಿಕೆ ಆಗುವಂಥದ್ದು ನಾನೇನು ಮಾಡಿಲ್ಲ, ಮಾಡಿಕೊಂಡಿದ್ದು ನೀವು ಎಂದು ಹೆಚ್.ಡಿಕೆ ಗುಡುಗಿದರು..
ಚಾಲಕ ಜಗದೀಶ್ ಕುಟುಂಬದ ಜತೆ ನಾನು ಏನು ಮಾತಾಡಿದ್ದೇನೆ. ವೈದ್ಯರ ಜತೆ ಏನು ಮಾತಾಡಿದ್ದೇನೆಂಬ ವಾಯ್ಸ್ ರೆಕಾರ್ಡ್ ಇದೆ. ನಾನು ಲಕ್ಷಾಂತರ ಬಡ ಕುಟುಂಬಗಳ ಜೀವ ಉಳಿಸಿದವನು. ಇವರ ರೀತಿ ಕೊಲೆಗಡುಕ ಅಲ್ಲ. ತನಿಖೆ ಆಗುವವರಗೆ ಸಚಿವರು ರಾಜೀನಾಮೆ ಕೊಟ್ಟು ಹೊರಗಿರಲಿ ಎಂದು ಹೆಚ್.ಡಿಕೆ ಒತ್ತಾಯಿಸಿದರು. ಕೊಲೆಗಡುಕ ಪದಕ್ಕೆ ಶಾಸಕ ಹೆಚ್.ಸಿ.ಬಾಲಕೃಷ್ಣ ತೀವ್ರ ವಿರೋಧ ವ್ಯಕ್ತಪಡಿಸಿದರು. ನಮ್ಮ ಹಂಗಿನಲ್ಲಿ ಸಿಎಂ ಆದವರು ಎಂದು ಚಲುವರಾಯಸ್ವಾಮಿ ಹೇಳಿದ್ದು ಇದಕ್ಕೆ ಗತಂ ಆದ ಹೆಚ್ ಡಿಕೆ, ನಾನು, ದೇವೇಗೌಡರು ಕಾಂಗ್ರೆಸ್ನಿಂದ ಸಿಎಂ ಆಗಿಲ್ಲ ಎಂದರು. ಈ ವೇಳೆ ತಿರುಗೇಟು ನೀಡಿದ ಶಾಸಕ ನರೇಂದ್ರಸ್ವಾಮಿ, ಕಾಂಗ್ರೆಸ್ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಲಿ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಅವರಿಗೆ ಮಾತಾಡಲು ಅವಕಾಶ ಕೊಡಿ ಎಂದರು.
ಈಶ್ವರಪ್ಪರಿಂದ ರಾಜೀನಾಮೆ ಮಾಡಿಸಿದ ಕಿತ್ತೋದ್ ಕಾಂಗ್ರೆಸ್ಸಿಗರು: ಕುಮಾರಸ್ವಾಮಿ
ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಎಂಬ ಕಾರಣಕ್ಕೆ ಈಶ್ವರಪ್ಪ ಅವರಿಂದ ಕಿತ್ತೋದ ಕಾಂಗ್ರೆಸ್ಸಿಗರು ರಾಜೀನಾಮೆ ಕೊಡಿಸಿದ್ದರು ಎಂದು ಆಕ್ರೋಶ ಹೊರಹಾಕಿದ ಕುಮಾರಸ್ವಾಮಿ, ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು.
Key words: Talk war –between- former CM –HDK-Minister- Chaluvarayaswamy