ದುಡಿಯುವ ಕೈಗಳಿಗೆ ಸ್ವಾವಲಂಬಿಯಾಗಿಸಲು ಯೋಜನೆ ಏನು..? ಸಿದ್ಧರಾಮಯ್ಯ ಬಜೆಟ್ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಲೇವಡಿ.

ಬೆಂಗಳೂರು,ಜುಲೈ,,7,2023(www.justkannada.in): ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ವಿಶೇಷತೆ ಏನಿಲ್ಲ. ಒಂದೇ ವರ್ಷಕ್ಕೆ ಜನರ ಮೇಲೆ 85,000 ಕೋಟಿ ಸಾಲ ಹೇರುತ್ತಾರೆ. 1995ರಿಂದ ಈವರೆಗೆ ಸಿದ್ದರಾಮಯ್ಯ ಮಂಡಿಸಿದ 13 ಬಜೆಟ್​ಗಳ ಅಧ್ಯಯನ ಮಾಡಿದ್ದೇನೆ. ದುಡಿಯುವ ಕೈಗಳಿಗೆ ಸ್ವಾವಲಂಬಿಯಾಗಿಸಲು ಯೋಜನೆ ಏನು ಎಂದು ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

ಸಿಎಂ ಸಿದ್ಧರಾಮಯ್ಯ ಇಂದು ಮಂಡಿಸಿದ ಬಜೆಟ್ ಬಗ್ಗೆ ಟೀಕಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಆದಾಯ ಹೆಚ್ಚಿಸಲು ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಅನ್ನಭಾಗ್ಯ ಅಕ್ಕಿಗೆ ನೀಡುವ ಹಣ ಅಬಕಾರಿ ಇಲಾಖೆಗೆ ಹೋಗುತ್ತೆ. ಆ ಅನ್ನಭಾಗ್ಯದ ಹಣವನ್ನು ತೆಗೆದುಕೊಂಡು ಮನೆಗೆ ಹೋಗುತ್ತಾನೋ, ಇನ್ನೆಲ್ಲಿಗೆ ಹೋಗುತ್ತಾನೋ ನನಗೆ ಗೊತ್ತಿಲ್ಲ ಎಂದು ಲೇವಡಿ ಮಾಡಿದರು.

ನಿಮ್ಮ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ. ಇನ್ನೂ ಎರಡು ಗ್ಯಾರಂಟಿಗಳನ್ನು ಕೊಡಿ ನಮ್ಮದೇನು ತಕರಾರಿಲ್ಲ. ಗ್ಯಾರಂಟಿಗಳಿಗೆ ವರ್ಷಕ್ಕೆ 50-60 ಸಾವಿರ ಕೋಟಿ ವೆಚ್ಚ ಆಗಲಿದೆ. ಬೇರೆ ಯಾವುದಕ್ಕೂ ಬಜೆಟ್​ನಲ್ಲಿ ಸರ್ಕಾರ ಹಣ ಮೀಸಲಿಟ್ಟಿಲ್ಲ. ಕೇಂದ್ರ ಮತ್ತು ಹಿಂದಿನ ಸರ್ಕಾರವನ್ನು ದೂಷಿಸುವ ಬಜೆಟ್ ಅಷ್ಟೇ ಎಂದು ಹೆಚ್.ಡಿಕೆ ಕಿಡಿಕಾರಿದರು.

Key words: Siddaramaiah- budget-Former CM- HD Kumaraswamy – criticize