ಹುಬ್ಬಳ್ಳಿ,ಜುಲೈ,10,2023(www.justkannada.in): ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಪ್ರಕರಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಜೈನ ಮಂದಿರಕ್ಕೆ ರಕ್ಷಣೆ ಕೊಡಲು , ಜೈನ ಸಮುದಾಯದ ಮಂಡಳಿ ರಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ಭರವಸೆ ನೀಡಿದರು.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಡಿವೈಎಸ್ಪಿ ನೇತೃತ್ವದಲ್ಲಿ ಜೈನಮುನಿ ಹತ್ಯೆ ಪ್ರಕರಣದ ತನಿಖೆ ಆಗುತ್ತಿದೆ. ತನಿಖೆಯ ಬಳಿಕ ಇನ್ನೂ ಕೆಲವು ವಿಚಾರಗಳು ಬಯಲಿಗೆ ಬರಬಹುದು. ಗೃಹ ಇಲಾಖೆ ಪ್ರಮಾಣಿಕ ಪ್ರಯತ್ನ ಮಾಡುತ್ತಿದೆ. ಇದು ಯಾರ ವೈಫಲ್ಯದಿಂದ ನಡೆದ ಘಟನೆಯಲ್ಲ ಎಂದರು.
ಸ್ವಾಮೀಜಿ ನಾಲ್ಕು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿಗಳ ಯಾತ್ರೆ ವೇಳೆ ರಕ್ಷಣೆ ಕೊಡಬೇಕು ಎಂದು ತಿಳಿಸಿದ್ದಾರೆ. ಜೈನ ಸಮುದಾಯದ ಸಂಘ ಸಂಸ್ಥೆಗಳ ಲಿಖಿತ ರೂಪದಲ್ಲಿ ತಿಳಿಸಿದರೇ ನಾವು ರಕ್ಷಣೆ ಕೊಡುತ್ತೇವೆ. ಅವರು ತಂಗುವ ಜಾಗ ಅಧಿಕೃತ ಆಗಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಜೈನ ಸ್ವಾಮೀಜಿ ಶಾಲಾ ಕಾಲೇಜುಗಳಲ್ಲಿ ಉಳಿದುಕೊಳ್ಳುತ್ತಾರೆ. ಈ ವಿಚಾರವಾಗಿ ನಾನು ಮಧು ಬಂಗಾರಪ್ಪ ಜೊತೆ ಮಾತಾಡುತ್ತೇನೆ. ಜೈನ ಮಂಡಳಿ ಮಾಡಬೇಕು ಎಂದು ಹೇಳಿದ್ದಾರೆ. ಈಗಾಗಲೇ ಹಿಂದೂಳಿದ ವರ್ಗಗಳ ನಿಮಗ ಮಂಡಳಿ ಇದೆ. ಮುಖ್ಯಮಂತ್ರಿ ಗಮನಕ್ಕೆ ತಂದು ಜೈನ ಸಮುದಾಯದ ಮಂಡಳಿ ರಚಸಲು ಕ್ರಮ ಕೈಗೊಳ್ಳುತ್ತೇವೆ. ಬಜೆಟ್ ಮೊದಲೆ ಆಗಿದ್ದರೇ ನಾವು ಪ್ರಕಟಣೆ ಮಾಡುತ್ತಿದ್ದವು. ಜೈನ ಮಂದಿರಗಳಿಗೆ ರಕ್ಷಣೆ ಕೊಡಬೇಕು ಎಂದಿದ್ದಾರೆ. ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದು ತಿಳಿಸಿದರು.
Key words: Home Minister- Dr. G. Parameshwar – protect -Jain temple