ಮೈಸೂರು,ಜುಲೈ,20,2023(www.justkannada.in): ನಿನ್ನೆ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಹಿನ್ನೆಲೆ, ಸಾಂಸ್ಕೃತಿಕ ಮೈಸೂರಿನಲ್ಲಿ ಕಟ್ಟೆಚ್ಚರವಹಿಸಲಾಗಿದೆ.
ನಿನ್ನೆ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನ ಬಂಧಿಸಿ ವಿಚಾರಣೆಗೊಳಪಡಿಸಿದ್ದರು. ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಸ್ಪೋಟಕ ಮಾಹಿತಿ ವಿಚಾರಣೆ ವೇಳೆ ಬಹಿರಂಗವಾಗಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ಮೈಸೂರಿನಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ರಾತ್ರಿ ಗಸ್ತಿನ ಬಗ್ಗೆ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಸೂಚನೆ ನೀಡಿದ್ದಾರೆ. ಉದಯಗಿರಿ ಠಾಣಾ ಪೊಲೀಸರಿಂದ ನೈಟ್ ಬೀಟ್ ಮತ್ತಷ್ಟು ಚುರುಕುಗೊಂಡಿದ್ದು, ಮೈಸೂರಲ್ಲಿ ಕಿಡಿಗೇಡಿಗಳ ಚಟುವಟಿಕೆಗೆ ಬ್ರೇಕ್ ಹಾಕುವಂತೆ ಸೂಚಿಸಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ ತಿಳಿಸಿದ್ದಾರೆ.
ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನ ನಿಯೋಜಿಸಲಾಗಿದ್ದು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರ ಸೂಚನೆ ಮೇರೆಗೆ ರಾತ್ರಿ ಗಸ್ತು ಚುರುಕಿಗೆ ಸೂಚನೆ ನೀಡಲಾಗಿದೆ.
Key words: Background – arrest –suspected-terrorists Bangalore- Strictly-aaction-Mysore.