ಬೆಂಗಳೂರು,ಜುಲೈ,28,2023(www.justkannada.in): ನಾನು ಈ ಅವಧಿಯಲ್ಲಿ ಸಿಎಂ ರೇಸ್ ನಲ್ಲಿ ಇಲ್ಲ, ಮುಂದಿನ ಅವಧಿಯಲ್ಲಿ ಸಿಎಂ ಹುದ್ದೆ ರೇಸ್ ನಲ್ಲಿರುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್ ಕುಟುಂಬದ ಸದಸ್ಯರು. ಅವರ ಹೇಳಿಕೆ ಕರ್ನಾಟಕಕ್ಕೆ ಸಂಬಂಧಪಟ್ಟಿಲ್ಲ. ಹರಿಪ್ರಸಾದ್ ಅವರ ಅನುಭವ ಹಂಚಿಕೊಂಡಿದ್ದಾರೆ. ಕೆಲವು ಸಮುದಾಯಗಳಿಗೆ ಅವಕಾಶ ಸಿಗಲಿಲ್ಲ ಎಂದರು.
ಇನ್ನು ಸಿಎಂ ಬದಲಾವಣೆ ಬಗ್ಗೆ ಗೊತ್ತಿಲ್ಲ, ಸಿಎಂ ಅಧಿಕಾರ ಹಂಚಿಕೆ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ. ಸಿಎಂ ಆಗಿ ಸಿದ್ದರಾಮಯ್ಯ ಅವರು ಒಳ್ಳೆಯ ಕಾರ್ಯಕ್ರಮ ಕೊಟ್ಟಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
Key words: race – post of CM -next term- Minister- Satish Jarakiholi.