ಬೆಂಗಳೂರು,ಆಗಸ್ಟ್,8,2023(www.justkannada.in): ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ದ ದುರುದ್ದೇಶಪೂರಿತ ಆರೋಪ ಮಾಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ದೂರು ನೀಡಿದ್ದಾರೆ.
ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಪರಮೇಶ್ವರ್ ಭೇಟಿಯಾದ ಶಾಸಕ ಪಿ,ಎಂ ನರೇಂದ್ರಸ್ವಾಮಿ, ದಿನೇಶ್ ಗೂಳಿಗೌಡ, ರಮೇಶ್ ಬಾಬು ಹಾಗೂ ಮುಖಂಡರು ಮನವಿ ಸಲ್ಲಿಸಿದರು. ಸಚಿವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬುದು ದುರುದ್ದೇಶಪೂರಿತ ಆರೋಪ. ನಕಲಿ ಪತ್ರದ ಹಿಂದಿನ ಶಕ್ತಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ಸಚಿವರ ವಿರುದ್ಧದ ತೇಜೋವಧೆ ಕೇಸ್ ಗಂಭೀರವಾಗಿ ಪರಿಗಣಿಬೇಕು ಎಂದು ಆಗ್ರಹಿಸಿದರು. ಈ ಕುರಿತು ಮಾತನಾಡಿದ ಮಾತನಾಡಿದ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ದುರ್ಬಳಕೆ ಮಾಡುವ ಪ್ರಯತ್ನ ಮಾಡುತ್ತಿದೆ. ಸಚಿವರ ವಿರುದ್ಧದ ಪತ್ರದ ಬಗ್ಗೆ ಸಿಎಸ್ಗೆ ಗವರ್ನರ್ ಸೂಚಿಸಿದ್ದಾರೆ. ಈ ರೀತಿ ಮಾಡುವುದು ಎಷ್ಟರ ಮಟ್ಟಿಗೆ ಸರಿ. ಪತ್ರದ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಸಿಐಡಿ ತನಿಖೆಯಿಂದ ಸತ್ಯಾಂಶ ಹೊರಗಡೆ ಬರಲಿ ಎಂದರು.
Key words: allegation- against- N. Chaluvarayaswamy-Congress MLAs- complain – Home Minister.