ಚಿಕ್ಕಮಗಳೂರು,ಆಗಸ್ಟ್,12,2023(www.justkannada.in): ಚಿಕ್ಕಮಗಳೂರು ಜಿಲ್ಲೆ ಕಡೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಆನಂದ್ ವಿರುದ್ಧ ಸ್ಟೇಟಸ್ ಹಾಕಿದ ಆರೋಪದ ಮೇಲೆ ಕಡೂರು ಪೊಲೀಸ್ ಠಾಣೆ ಮಹಿಳಾ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ.
ಕಡೂರು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಲತಾ ಅಮಾನತಾದವರು. ಶಾಸಕ ಆನಂದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಮಹಿಳಾ ಕಾನ್ಸ್ ಟೇಬಲ್ ಲತಾ, ನನಗೆ ಏನಾದರೂ ತೊಂದರೆಯಾದರೆ ಕಡೂರು ಶಾಸಕ ಕಾರಣ. ಕಡೂರು ಶಾಸಕರಿಗೆ ನನ್ನ ಧಿಕ್ಕಾರ ಎಂದು ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಉಲ್ಲೇಖಿಸಿದ್ದರು.
ಈ ಮಧ್ಯೆ, ಶಾಸಕ ಆನಂದ್ ವಿರುದ್ಧ ಪೋಸ್ಟ್ ಮಾಡಿದ್ದಕ್ಕೆ ಮಹಿಳಾ ಕಾನ್ಸ್ ಟೇಬಲ್ ಲತಾರನ್ನ ಅಮಾನತು ಮಾಡಿ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರು ಆದೇಶ ಹೊರಡಿಸಿದ್ದಾರೆ.
Key words: Allegation – status -against -Congress MLA – constable -suspended.