ಮೈಸೂರು,ಆಗಸ್ಟ್,16,2023(www.justkannada.in): ಮೈಸೂರಿನಲ್ಲಿ ಕಿಂಗ್ ಫಿಶರ್ ಬಿಯರ್ ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಶರ್ ಬಿಯರ್ ಜಪ್ತಿ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಮೈಸೂರು ಗ್ರಾ. ಅಬಕಾರಿ ಉಪ ಆಯುಕ್ತ ಎ.ರವಿಶಂಕರ್, ಕಿಂಗ್ಫಿಶರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದೆ. ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ ಬಿಯರ್ ನಲ್ಲಿ ಸ್ಟ್ರಾಂಗ್ ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಒಟ್ಟು 78,678 ಬಿಯರ್ ಬಾಕ್ಸ್ ಗಳನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದರು.
ಗುಣಮಟ್ಟದ ಬಿಯರ್ ತಯಾರಿಸದ ಹಿನ್ನೆಲೆ ಎಫ್ ಐಆರ್ ದಾಖಲಾಗಿದೆ. ರಿಟೈಲ್ ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ. ಇನ್ ಹೌಸ್ ಕೆಮಿಸ್ಟ್ ಅವರು ಕೊಟ್ಟಿರುವ ರಿಪೋರ್ಟ್ ಮೇಲೆ ಕ್ರಮ ಕೈಗೊಳ್ಳಲಾಗುತ್ತೆ ಎಂದರು.
Key words: Risk factor- detection-25 crores – Mysore- Seizure – King Fisher- beer