ನವದೆಹಲಿ,ಸೆಪ್ಟಂಬರ್,2,2023(www.justkannada.in): ಇಸ್ರೋದ ಮತ್ತೊಂದು ಮಹತ್ವಾಕಾಂಕ್ಷಿ ಆದಿತ್ಯ ಎಲ್-1 ನೌಕೆ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಇಂದು ಉಡಾವಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ನಮ್ಮ ದೇಶದ ವಿಜ್ಞಾನಿಗಳ ಕಠಿಣ ಪರಿಶ್ರಮ ಮುಂದುವರಿಯಲಿದೆ. ಸಂಪೂರ್ಣ ಮಾನವನ ಕಲ್ಯಾಣಕ್ಕಾಗಿ ಪರಿಶ್ರಮ ಮುಂದುವರಿಯಲಿದೆ .ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.
ಹಾಗೆಯೇ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸಹ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರಿಗೆ ಮತ್ತು ಅವರ ನೇತೃತ್ವದ ವಿಜ್ಞಾನಿಗಳ ತಂಡಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
Key words: Aditya L-1 launch- PM Modi –congratulates- ISRO- scientists