ನವದೆಹಲಿ:ಮೇ-12:(www.justkannada.in) ಲೋಕಸಭಾ ಚುನಾವಣೆಯ 6ನೇ ಹಂತದಲ್ಲಿ 7 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾಗಿರುವ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
6ನೇ ಹಂತದದಲ್ಲಿ ಉತ್ತರಪ್ರದೇಶ, ಹರಿಯಾಣ, ಬಿಹಾರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ದೆಹಲಿ ಹಾಗೂ ಜಾರ್ಖಂಡ್ನ 979 ಅಭ್ಯರ್ಥಿಗಳು ಮತ ಪರೀಕ್ಷೆ ಎದುರಿಸಲಿದ್ದು, 10.16 ಕೋಟಿ ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ.
ಹಿಂದಿ ಹೃದಯ ಭಾಗ ಹಾಗೂ ಪಶ್ಚಿಮ ಬಂಗಾಳದಲ್ಲಿ ಈ ಮತದಾನ ನಡೆಯುತ್ತಿದ್ದು, ಆಡಳಿತಾರೂಢ ಬಿಜೆಪಿಯ ನಿರ್ಣಾಯಕ ಮತಕ್ಷೇತ್ರಗಳನ್ನು ಒಳಗೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ಕಳೆದ 5 ಹಂತಗಳ ಮತದಾನದ ವೇಳೆ ಹಿಂಸಾಚಾರ ನಡೆದಿದೆ. ಈ ಹಿನ್ನೆಲೆಯಲ್ಲಿ 6ನೇ ಹಂತದಲ್ಲಿ ಮತದಾನ ನಡೆಯುವ ಎಲ್ಲ 15,428 ಮತಗಟ್ಟೆಗಳಲ್ಲಿ ಕೇಂದ್ರ ಅರೆಸೇನಾ ಪಡೆಗಳನ್ನು ಚುನಾವಣಾ ಆಯೋಗ ನಿಯೋಜಿಸಿದೆ.
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹರಿಯಾಣದ ಗುರುಗ್ರಾಮದ ಪೈನ್ಕ್ರೆಸ್ಟ್ ಸ್ಕೂಲ್ನಲ್ಲಿ ಹಕ್ಕು ಚಲಾವಣೆ ಮಾಡಿದರು.
ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರು ದೆಹಲಿಯ ಹಳೆಯ ರಾಜಿಂದರ್ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತದಾನ ಮಾಡಿದರು.
ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿ ಶೀಲಾ ದೀಕ್ಷಿತ್ ದೆಹಲಿಯ ನಿಜಾಮುದ್ದೀನ್ ಪ್ರದೇಶದ ಮತಗಟ್ಟೆಯಲ್ಲಿ ಹಕ್ಕು ಚಲಾವಣೆ ಮಾಡಿದರು.